’! ಶಾಲೆ ಪುನಾರಂಭಕ್ಕೆ ಕೇಂದ್ರದಿಂದ ಮಾರ್ಗದರ್ಶಿ ಸೂತ್ರ ನವದೆಹಲಿ, ಮೇ 8, 2020 (..):ಲಾಕ್ ಡೌನ್ ಮುಗಿದ ನಂತರ ಶಾಲೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಮಾರ್ಗದರ್ಶಿ ಸೂತ್ರಗಳನ್ನು ಸಿದ್ಧಪಡಿಸುತ್ತಿದೆ. ಮಾನವ ಸಂಪನ್ಮೂಲ ಸಚಿವಾಲಯದ ವತಿಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದ್ದು, ಶಾಲೆಗಳಲ್ಲಿ ಸಮ -ಬೆಸ ಯೋಜನೆ ಜಾರಿಗೆ ತರಲು ಚಿಂತನೆ ನಡೆಸುತ್ತಿದೆ. ಶಾಲೆಗಳಲ್ಲಿ ಶೇ.50ರಷ್ಟು ವಿದ್ಯಾರ್ಥಿಗಳಿರುವಂತೆ ಗೈಡ್‍ಲೈನ್ಸ್ ರೂಪಿಸಲಾಗುತ್ತಿದೆ. ವಿದ್ಯಾರ್ಥಿಗಳ ಕಲಿಕೆಗೆ ಅನುವಾಗುವಂತೆ 1 ನೇ ತರಗತಿಯಿಂದ ಪಿಯುಸಿ ವರೆಗೆ 12 ಪ್ರತ್ಯೇಕ ವಾಹಿನಿಗಳನ್ನು ಪ್ರಾರಂಭಿಸಲಾಗುವುದು. ಶಾಲೆಗಳಲ್ಲಿ ಸಮ -ಬೆಸ ಯೋಜನೆ ಜಾರಿಗೆ ತರುವುದರಿಂದ ಮಕ್ಕಳು ಅಂತರ ಕಾಯ್ದುಕೊಳ್ಳಲು, ಸುರಕ್ಷತೆ ಅನುಸರಿಸಲು ಅನುಕೂಲವಾಗುತ್ತದೆ.