ಕೆಎಸ್’ಆರ್’ಟಿಸಿ, ಬಿಎಂಟಿಸಿ ನೌಕರರಿಗೆ ಸಿಹಿ ಸುದ್ದಿ ಬೆಂಗಳೂರು , ಮೇ 05, 2020 (..):ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಶೀಘ್ರದಲ್ಲೇ ವೇತನ ಪಾವತಿಸಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ವೇತನ ಕಡಿತ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ವೇತನ ಪಾವತಿಸುವ ಸಲುವಾಗಿ ಸರ್ಕಾರದಿಂದ 320 ಕೋಟಿ ರೂಪಾಯಿ ನೆರವು ಕೋರಿ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಕೆಎಸ್‌ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಂಡಿರುವ ಪರಿಣಾಮ ನೌಕರರು ವೇತನ ದೊರೆಯದೆ ಕಂಗಾಲಾಗಿದ್ದರು. ಇದೀಗ ಎಲ್ಲ ನೌಕರರಿಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ.