ಇಂದು ಮೆಜಿಸ್ಟಿಕ್ ಕೆ‌ಎಸ್’ಆರ್’ಟಿಸಿ ನಿಲ್ದಾಣದಿಂದ ಕಾರ್ಮಿಕರಿಗಾಗಿ ಬಸ್ ಸಂಚಾರ ಬೆಂಗಳೂರು, ಮೇ 03, 2020 (..):ಕೆ‌ ಎಸ್ ಆರ್ ಟಿ‌ ಸಿ‌ ಯು ಇಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ, ಕಾರ್ಮಿಕರಿಗಾಗಿ ಕೆಂಪೇಗೌಡ ಬಸ್ ನಿಲ್ದಾಣ ( ಮೆಜೆಸ್ಟಿಕ್) ನಿಂದ ಬಸ್ಸುಗಳನ್ನು ಕಾರ್ಯಚರಣೆಯನ್ನು ಬಿ ಎಂ ಟಿ‌ ಸಿ ಬಸ್ ನಿಲ್ದಾಣ ( ಮೆಜೆಸ್ಟಿಕ್) ಗೆ ಸ್ಥಳಾಂತರಿಸಲಾಗಿದೆ. ( ಸಾಮಾಜಿಕ ಅಂತರವನ್ನು ಕಾಪಾಡಲು ಅನುಕೂಲವಾಗುವ ನಿಟ್ಟಿನಲ್ಲಿ) ಈ ವ್ಯವಸ್ಥೆ ಮಾಡಲಾಗಿದ್ದು, ಸದರಿ ಬಸ್ ವ್ಯವಸ್ಥೆಯು (ಕೆಂಪು ವಲಯ ಹೊರತು ಪಡಿಸಿ) ಬೇರೆ ಸ್ಥಳಗಳಿಗೆ ಕಾರ್ಯಚರಣೆಯಾಗಲಿದೆ. ಕಾರ್ಮಿಕರು ಯಾವುದೇ ಆತಂಕಕ್ಕೆ ಒಳಗಾಗಬಾರದು, ಸೂಕ್ತ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಸಹಕರಿಸಬೇಕು. ಬಸ್ಸುಗಳ ನಿರಂತರ ಪೂರೈಕೆ ಇರುತ್ತದೆ. ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಬಸ್ಸುಗಳಿಗೆ ತೆರಳುವ ಮುನ್ನ ಸೂಕ್ತ ಆರೋಗ್ಯ ಪರಿಶೀಲನೆ ‌ನಡೆಸಿ, ಸಂಪೂರ್ಣ ಮಾಹಿತಿಯನ್ನು ದಾಖಲಿಸುವ ವ್ಯವಸ್ಥೆ ಮಾಡಲಾಗಿದೆ. ಬಸ್ಸುಗಳ ನಿರ್ಗಮನದ ಮಾಹಿತಿಯನ್ನು ಸಂಬಂದಪಟ್ಡ. ನಿಗಮದ ವಿಭಾಗಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ನೀಡಲಾಗುತ್ತಿದೆ. ಮಾರ್ಗ ಮಧ್ಯೆ ಯಾವುದೇ ಪ್ರಯಾಣಿಕರನ್ನು ಇಳಿಸುವುದಿಲ್ಲ, ಬಸ್ ನಿಲ್ದಾಣಗಳಲ್ಲಿಯೇ ಇಳಿಸಲಾಗುತ್ತಿದ್ದು, ಅಲ್ಲಿ ಅವರಿಗೆ ಮತ್ತೊಮ್ಮೆ ಜಿಲ್ಲಾಡಳಿತದಿಂದ ಆರೋಗ್ಯ ತಪಾಸಣೆ‌ ನಡೆಸಿ ಗೆ ಸಂಬಂಧಪಟ್ಡಂತೆ ಮಾಹಿತಿ‌ ನೀಡಲಾಗುತ್ತಿದೆ. ಇಂದು ಪ್ರತಿ‌ ಗಂಟೆಗೊಮ್ಮೆ ಬಸ್ ಕಾರ್ಯಚರಣೆಯ ಮಾಹಿತಿಯನ್ನು ಸಂಬಂಧಪಟ್ಟ ಜಿಲ್ಲಾಡಳಿತಕ್ಕೆ ನೀಡಲಾಗುತ್ತದೆ.