ಮೇ 3ರ ಬಳಿಕವೂ ಲಾಕ್ ಡೌನ್ ಮುಂದುವರಿಕೆ ಸಾಧ್ಯತೆ ನವದೆಹಲಿ, ಮೇ 01, 2020 (..):ಕೇಂದ್ರ ಗೃಹ ವ್ಯವಹಾರ ಸಚಿವಾಲಯ ( ) ವು ಮೇ 3ರ ನಂತವೂ ಲಾಕ್‌ಡೌನ್ ವಿಸ್ತರಿಸುವ ಬಗ್ಗೆ ಕೆಲವು ಸುಳಿವು ನೀಡಿದೆ. ಹೌದು. ಲಾಕ್‌ಡೌನ್ ಅನ್ನು ಮೇ 3ರ ಆಚೆಗೆ ವಿಸ್ತರಿಸಲಾಗುವುದು ಎಂದು ಗೃಹ ಸಚಿವಾಲಯ ಸ್ಪಷ್ಟ ಸೂಚನೆಗಳನ್ನು ನೀಡಿದೆ. ಆದರೆ ಹಲವೆಡೆ ಲಾಕ್‌ಡೌನ್ ನಿಯಮಗಳನ್ನು ಇನ್ನಷ್ಟು ಸಡಿಲಗೊಳಿಸುವುದರೊಂದಿಗೆ ಲಾಕ್‌ಡೌನ್ ಅನ್ನು ವಿಸ್ತರಿಸಬಹುದು. ಲಾಕ್‌ಡೌನ್ ಪರಿಸ್ಥಿತಿಯನ್ನು ಪರಿಶೀಲಿಸಲು ಕರೆಯಲಾಗಿದ್ದ ಸಭೆಯಲ್ಲಿಕರೋನಾವೈರಸ್()ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ಉತ್ತಮ ಫಲಿತಾಂಶ ನೀಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.