ಬಾಲಿವುಡ್‌ ಹಿರಿಯ ನಟ ರಿಷಿ ಕಪೂರ್ ನಿಧನ ಮುಂಬೈ, ಏಪ್ರಿಲ್ 30, 2020 (..):ಬಾಲಿವುಡ್‌ ಹಿರಿಯ ನಟ ರಿಷಿ ಕಪೂರ್ (67)‌ ಬೆಳಗ್ಗೆ ನಿಧನರಾಗಿದ್ದಾರೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರನ್ನು ಇಲ್ಲಿನ ಸರ್ ಎಚ್‌ಎನ್‌ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಬುಧವಾರ ರಾತ್ರಿ ದಾಖಲಿಸಲಾಗಿತ್ತು. 2018ರಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕಪೂರ್‌, ಅಮೆರಿಕದಲ್ಲಿ ಒಂದು ವರ್ಷಕಾಲ ಚಿಕಿತ್ಸೆ ಪಡದು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ವಾಪಸ್‌ ಆಗಿದ್ದರು. ಫೆಬ್ರವರಿಯಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿದ್ದರು. ಭಾರತೀಯ ಸಿನಿಮಾ ರಂಗದ ಖ್ಯಾತ ನಟ ರಾಜ್‌ ಕಪೂರ್‌ ಹಾಗೂ ಕೃಷ್ಣ ರಾಜ್‌ ಕಪೂರ್ ಮಗನಾದ ರಿಷಿ ಕಪೂರ್‌, ಮೇರಾ ನಾಮ್‌ ಜೋಕರ್‌ ಮೂಲಕ 1970ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು.