ಸುತ್ತೂರು ಮಠಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ಮೈಸೂರು, ಏಪ್ರಿಲ್ 11, 2020 (.): ಸುತ್ತೂರು ಮಠ ಮೈಸೂರು ಶಾಖೆಗೆ ಭೇಟಿ ನೀಡಿದ ಮಾನ್ಯ ಸಹಕಾರ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು, ಜಗದ್ಗುರು ಶ್ರೀ ಶಿವರಾತ್ರಿದೇಶೀಕೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಶ್ರೀಗಳು ಮಾನ್ಯ ಸಚಿವರ ಜೊತೆ ಮಾತನಾಡುತ್ತಾ, ಈ ಮಹಾಮಾರಿ ಕರೋನಾ ಸಾಂಕ್ರಾಮಿಕ ರೋಗವು ಆದಷ್ಟು ಶೀಘ್ರವಾಗಿ ತೊಲಗಬೇಕು. ಸರ್ಕಾರ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಶ್ಲಾಘಿಸಿದರು. ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಮಾಜಿ ಸಚಿವರು, ಬಿಜೆಪಿ ಹಿರಿಯ ಮುಖಂಡರಾದ ಎಚ್. ವಿಶ್ವನಾಥ್, ಸಂಸದರಾದ ಪ್ರತಾಪ್ ಸಿಂಹ ಜೊತೆಗಿದ್ದರು.