ಕುಟುಂಬ ರಾಜಕೀಯ, ಭ್ರಷ್ಟಾಚಾರ ಕಾಂಗ್ರೆಸ್ ಗೆ ಆಕ್ಸಿಜನ್: ಕರ್ನಾಟಕ ‘ಕೈ’ಹೈಕಮಾಂಡ್ ನ ಎಟಿಎಂ- ಪ್ರಧಾನಿ ಮೋದಿ ವಾಗ್ದಾಳಿ. ಕಲ್ಬುರ್ಗಿ,ಮಾರ್ಚ್,16,2024(..):ಕುಟುಂಬ ರಾಜಕೀಯ, ಭ್ರಷ್ಟಾಚಾರ ಕಾಂಗ್ರೆಸ್ ಗೆ ಆಕ್ಸಿಜನ್ ಆಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಕರ್ನಾಟಕ ಕಾಂಗ್ರೆಸ್ ಹೈಕಮಾಂಡ್ ನ ಎಟಿಎಂ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. ಕಲ್ಬುರ್ಗಿಯ ಎನ್ ವಿ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಕರ್ನಾಟಕ ಜನತೆಗೆ ನಮಸ್ಕಾರಗಳು. ತಮಿಳುನಾಡು ಕನ್ಯಕುಮಾರಿ ಕೇರಳಗೆ ಭೇಟಿ ನೀಡಿದ್ದೆ. ಎಲ್ಲಾ ಜನರು ಅಪಾರ ಪ್ರೀತಿ ತೋರಿಸಿದ್ದಾರೆ ವಿಕಸಿತ್ ಭಾರತ ನಿರ್ಮಾಣಕ್ಕೆ ಸಂಕಲ್ಪ ಮಾಡಿದ್ದೇವೆ. ವಿಕಸಿತ್ ಭಾರತ ನಿರ್ಮಾಣಕ್ಕಾಗಿ ಬಿಜೆಪಿಗೆ ಜನ ಆಶೀರ್ವಾದ ಮಾಡುತ್ತಾರೆ. ಕಾಂಗ್ರೆಸ್ ನವರು ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಕಾಂಗ್ರೆಸ್ ಮೇಲೆ ದೇಶದ ಜನರಿಗೆ ಆಕ್ರೋಶವಿದೆ. ಲೋಕಸೆಭೆ ಚುನಾವಣೆಯಲ್ಲಿ ಪಾಠ ಕಲಿಸುತ್ತಾರೆ ಎಂದು ಹೇಳಿದರು. ದಕ್ಷಿಣ ಭಾರತದ ರಾಜ್ಯದಲ್ಲಿ ಬಿಜೆಪಿ ಬಗ್ಗೆ ಜನರು ಉತ್ಸುಕರಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಬಗ್ಗೆ ಜನ ಆಕ್ರೋಶಗೊಂಡಿದ್ದಾರೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಮುಳುಗಿ ಹೋಗಿದೆ. ಕಾಂಗ್ರಸ್ಸಿನ ಸತ್ಯ ಏನೆಂಬುದನ್ನ ಜನರು ತಿಳಿದುಕೊಂಡಿದ್ದಾರೆ. ಕಾಂಗ್ರೆಸ್ ಒಳ್ಳೆಯ ಕೆಲಸ ಮಾಡುವವರಲ್ಲ. ಕಾಂಗ್ರೆಸ್ ಸುಧಾರಿಸಿಕೊಳ್ಳುವವರಲ್ಲ. ರಾಜ್ಯ ಸರ್ಕಾರ ಎಷ್ಟು ಬೇಗ ಜನರ ಆಕ್ರೋಶಕ್ಕೆ ಗುರಿಯಾಗಿದೆ . ಜನರ ಮನಸ್ಸಿನಲ್ಲಿ ಭರವಸೆಯ ಇಲ್ಲದಂತಾಗಿದೆ ಕಾಂಗ್ರೆಸ್ ಸರ್ಕಾರ ಚುನಾವಣೆ ವೇಳೆ ಘೋಷಣೆ ಮಾಡೋದು ಜೇಬು ತುಂಬಿಸಿಕೊಳ್ಳೋದು . ಕರ್ನಾಟಕ ಕಾಂಗ್ರೆಸ್ ಹೈಕಮಾಂಡ್ ನ ಎಟಿಎಂ ಆಗಿದೆ ಎಂದು ಹರಿಹಾಯ್ದರು. : –- - – : - - .