ಸಂಜಯನಗರ ಠಾಣೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪಿ, ಮತ್ತೆ ಕಿರಿಕ್. ಕಾಲಿಗೆ ಗುಂಡೇಟು. ಬೆಂಗಳೂರು, ಮಾ.26, 2020 : (.. ) ಪೊಲೀಸ್ ಪೇದೆಗಳಿಬ್ಬರ ಮೇಲೆ ಹಲ್ಲೆ ನಡೆಸಿ ಬುಧವಾರ ಬಂಧನಕ್ಕೊಳಗಾಗಿದ್ದ ಆರೋಪಿ, ಗುರುವಾರ ಮತ್ತದೆ ತಪ್ಪು ಮಾಡಿದದ್ದರಿಂದ ಆತನ ಕಾಲಿಗೆ ಪೊಲೀಸರು ಗುಂಡು ಹಾರಿದ ಘಟನೆ ನಡೆದಿದೆ.ಬಂಧಿತ ಆರೋಪಿ ತಾಜುದ್ದೀನ್ ಪೊಲೀಸರ ಗುಂಡೇಟು ತಿಂದಿರುವಾತ. ಬುಧವಾರ ಮಧ್ಯಾಹ್ನ ಸಂಜಯನಗರ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರತ ಪೊಲೀಸ್ ಪೇದೆಗಳಿಬ್ಬರ ಮೇಲೆ ಆರೋಪಿ ತಾಜುದ್ದೀನ್ ಹಾಗೂ ಇತರರು ಹಲ್ಲೆ ನಡೆಸಿದ್ದರು. ಈ ಘಟನೆ ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು. ಬಳಿಕ ಸ್ಥಳ ಮಹಜರು ಮಾಡಲು ಆರೋಪಿಯನ್ನು ಕರೆದೊಯ್ದಿದ್ದರು. ಈ ವೇಳೆ ತಾಜುದ್ದೀನ್ ಪೊಲೀಸರ ಮೇಲೆ ಕಲ್ಲು ಎಸೆದು ಬಂಧನದಿಂದ ಎಸ್ಕೇಪ್ ಆಗಲು ಯತ್ನಿಸಿದ ಎನ್ನಲಾಗಿದೆ. ಆಗ ಸಂಜಯನಗರ ಪೊಲೀಸ್ ಇನ್ಸ್‌ಪೆಕ್ಟರ್ ಬಾಲಾಜಿ ಅವರು ಆರೋಪಿ ಮೇಲೆ ಫೈರಿಂಗ್ ನಡೆಸಿದರು. ಈ ಘಟನೆಯಲ್ಲಿ ಮಹಿಳಾ ಪಿಎಸ್‍ಐ ರೂಪಾ ಅವರ ಕೈಗೆ ಗಂಭೀರವಾಗಿ ಗಾಯವಾಗಿದೆ. ಆರೋಪಿ ಹಾಗೂ ರೂಪಾ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. : - - - - 2 . : A1 ( ) () . 2 . 3 . , . . .