ಕೊರೋನಾ ವೈರಸ್ ಗೆ ಭಾರತದಲ್ಲಿ 5ನೇ ಬಲಿ… ರಾಜಸ್ತಾನ,ಮಾ,20,2020(..): ಪ್ರಪಂಚದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಗೆ ದೇಶದಲ್ಲಿ 5ನೇ ಬಲಿಯಾಗಿದೆ. ರಾಜಸ್ತಾನದಲ್ಲಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಇಂದು ಸಾವನ್ನಪ್ಪಿದ್ದಾರೆ. ಭಾರತ ಪ್ರವಾಸಕ್ಕೆ ಬಂದಿದ್ದ 69 ವಯಸ್ಸಿನ ಇಟಲಿ ನಾಗರಿಕ ರಾಜಸ್ತಾನದ ಜೈಪುರದಲ್ಲಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ದೆಹಲಿ, ಕರ್ನಾಟಕ, ಮಹಾರಾಷ್ಟ್ರ ಪಂಜಾಬ್ ಬಳಿಕ ರಾಜಸ್ತಾನದಲ್ಲಿ ಕೊರೋನಾ ವೈರಸ್ ಗೆ ಮೊದಲ ಬಲಿಯಾಗಿದೆ. ಕೊರೋನಾ ಸೋಂಕಿತ ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆ ಪಂಜಾಬ್ ನಲ್ಲಿ ಕೊರೋನಾ ಸೋಂಕಿನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಇದೀಗ ಇಂದು ರಾಜಸ್ತಾನದಲ್ಲಿ 69 ವರ್ಷದ ಇಟಲಿ ನಾಗರೀಕ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾಗೆ ಎರಡು ಸಾವು ಸಂಭವಿಸಿದೆ. : - 5th– - -