ಅಂತರಾಷ್ಟ್ರೀಯ ವಿಮಾನಗಳ ಹಾರಾಟ ಬಂದ್ – ಕೊರೋನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ… ನವದೆಹಲಿ,ಮಾ,19,2020(..): ದೇಶದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಅಂತರಾಷ್ಟ್ರೀಯ ವಿಮಾನಗಳ ಹಾರಾಟವನ್ನ ಬಂದ್ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೊರೋನ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಯಾವುದೇ ವಿದೇಶಿ ವಿಮಾನಗಳು ಭಾರತದಲ್ಲಿ ಲ್ಯಾಂಡ್ ಆಗಲ್ಲ. ಮಾರ್ಚ್ 22 ರಿಂದ ಹೊಸ ಮಾರ್ಗ ಸೂಚಿಯನ್ನ ಕೇಂದ್ರ ಸರ್ಕಾರ ಘೋಷಿಸಿದೆ. ಈ ಪ್ರಕಾರ ಮಾರ್ಚ್ 22 ರಿಂದ ಮಾರ್ಚ್ 29ರವಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಇನ್ನು 10 ವರ್ಷದೊಳಗಿನ ಮಕ್ಕಳು ಸಹ ಮನೆಯೊಳಗೆ ಇರುವಂತೆ ಸೂಚನೆ ನೀಡಲಾಗಿದೆ. ಜತೆಗೆ ಖಾಸಗಿ ಕಂಪನಿಗಳ ನೌಕರರಿಗೆ ವರ್ಕ್ ಫ್ರಮ್ ಹೋಮ್ ಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ಈ ನಡುವೆ ಇಡೀ ಭಾರತಕ್ಕೆ ಭಾರತವೇ ಲಾಕ್ ಡೌನ್ ಇಲ್ಲ ಎಂದು ಮಾಹಿತಿ ನೀಡಿದೆ. : –- –- - - – .