ರೈತನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ ಎಸಿಬಿ ಬಲೆಗೆ… ಮೈಸೂರು,ಮಾ,18,2020(..): ರೈತರೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಮೈಸೂರಿನಲ್ಲಿ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ರೈತನ ಬಳಿ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸೋಮಯ್ಯ ಎಸಿಬಿ ಬಲೆಗೆ ಬಿದ್ದಿದ್ದಾರೆ. ಸಹಾಯಧನ ನೀಡಲು ರೈತ ದಿಲೀಪ್ ಬಳಿ ಸೋಮಯ್ಯ 3 ಸಾವಿರ ಲಂಚದ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಈ ಸಂಬಂಧ ದಿಲೀಪ್ ಎಸಿಬಿಗೆ ದೂರು ನೀಡಿದ್ದು ಎಸಿಬಿ ಎಸ್‌ಪಿ ರಶ್ಮಿ ಮಾರ್ಗದರ್ಶನದಲ್ಲಿ ಡಿಎಸ್‌ಪಿ ಪರಶುರಾಮಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ಅಧಿಕಾರಿ ಸೋಮಯ್ಯರನ್ನ ವಶಕ್ಕೆ ಪಡೆದಿದ್ದಾರೆ. : - - - - – -