ರಾಜ್ಯದಲ್ಲಿ ಮತ್ತೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆ: ಈ ಜಿಲ್ಲೆಯಲ್ಲಿ ಮೊದಲ ಪ್ರಕರಣ ಬೆಳಕಿಗೆ… ಕೊಡಗು,ಮಾ,19,2020(..): ರಾಜ್ಯದಲ್ಲಿ ಮತ್ತೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು,ಕೊಡಗು ಜಿಲ್ಲೆಯಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಿದೆ. ಸೌದಿಯಿಂದ ಕೊಡಗಿಗೆ ಬಂದಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ. ಈ ಬಗ್ಗೆ ಟ್ವಿಟ್ ಮಾಡಿ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಸೌದಿಯಿಂದ ಕೊಡಗಿಗೆ ಬಂದ ವ್ಯಕ್ತಿಗೆ ಇರುವುದು ದೃಢವಾಗಿದೆ. ಸೌದಿಯಿಂದ ಆ ವ್ಯಕ್ತಿ ಬಂದ ನಂತರ ಪ್ರತ್ಯೇಕವಾಗಿ ಇರಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಆ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ಕೊರೋನಾ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಮೇಲೆ ನಿಗಾ ಇರಿಸಲಾಗಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. : - – – - -