ಕೊರೋನಾ ವೈರಸ್ ಗೆ ಭಾರತದಲ್ಲಿ ಮೂರನೇ ಬಲಿ…. ಮುಂಬೈ,ಮಾ,17,2020(..): ದಿನೇ ದಿನೇ ದೇಶದಲ್ಲಿ ಕೊರೋನಾ ವೈರಸ್ ಭೀತಿ ಹೆಚ್ಚಾಗುತ್ತಿದ್ದು ಈ ನಡುವೆ ಕೊರೋನಾ ವೈರಸ್ ಗೆ ಭಾರತದಲ್ಲಿ ಮೂರನೇ ಬಲಿಯಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿ ಕೊರೋನಾ ಸೋಂಕಿಗೆ 64 ವರ್ಷದ ವೃದ್ಧ ಬಲಿಯಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಮುಂಬೈನ ಕಸ್ತೂರಿಬಾ ಆಸ್ಪತ್ರೆಯಲ್ಲಿ ಈ ವ್ಯಕ್ತಿಯನ್ನು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಮೂಲಕ ಭಾರತದಲ್ಲಿ ಕೊರೊನಾ ವೈರಸ್ ಗೆ ಮೂರನೇ ಬಲಿಯಾಗಿದೆ. ಕರ್ನಾಟಕದ ಕಲ್ಬುರ್ಗಿಯಲ್ಲಿ ಕೊರೊನಾ ವೈರಸ್ ಗೆ ಮೊದಲ ಬಲಿಯಾಗಿದ್ದರೆ, ದೆಹಲಿಯಲ್ಲಿ ಸೊಂಕಿನಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಇದೀಗ ಮಹಾರಾಷ್ಟ್ರದಲ್ಲಿ ಕೊರೋನಾಗೆ ವೃದ್ದ ಬಲಿಯಾಗಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. : - - –