ಪೋಕ್ಸೋ ಪ್ರಕರಣ: ಬಿಎಸ್ ವೈ ಹೆಸರಿಗೆ ಕಳಂಕ ತರುವ ಕೆಲಸ-ಮಾಜಿ ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ಮಾರ್ಚ್,15,2024(..):ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಇದು ಬಿಎಸ್ ವೈ ಅವರ ಹೆಸರಿಗೆ ಕಳಂಕ ತರುವ ಕೆಲಸವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತು ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ದೂರು ದಾಖಲಾದ ತಕ್ಷಣ ಕ್ರಮ ಕೈಗೊಳ್ಳಲಾಗುವುದಿಲ್ಲ. ಜವಾಬ್ದಾರಿಯಿಂದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದರು. ಗೃಹ ಸಚಿವರು ಹೇಳಿಕೆ ಕೊಟ್ಟಿರುವುದು ಸರಿಯಾಗಿದೆ. ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ ಅಂದಿದ್ದಾರೆ. ಬಿಎಸ್ ವೈ ಹೆಸರಿಗೆ ಕಳಂಕ ತರುವ ಕೆಲಸವಾಗಿದೆ. ಕೇಸ್ ದಾಖಲಿಸುವುದರ ಹಿಂದೆ ಸದುದ್ದೇಶ ಇಲ್ಲ. ಚುನಾವಣೆ ವೇಳೆ ಈ ರೀತಿ ಪ್ರಯತ್ನ ನಡೆಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು. : -- - -