ಲೋಕಸಭಾ ಚುನಾವಣೆಗೆ ನಾಳೆ ದಿನಾಂಕ ಪ್ರಕಟ. ನವದೆಹಲಿ,ಮಾರ್ಚ್,15,2024(..):ಭಾರಿ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಗೆ ದಿನಾಂಕ ನಾಳೆ ಘೋಷಣೆಯಾಗಲಿದೆ. ನಾಳೆ(ಮಾರ್ಚ್ 16) ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ ಎಂಬ ಮಾಹಿತಿ ತಿಳಿದು ಬಂದಿದೆ. 2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗವು ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದೆ ಎನ್ನಲಾಗಿದೆ. ಕಳೆದ ಬಾರಿ 7 ಹಂತಗಳಲ್ಲಿ ಚುನಾವಣೆ ನಡೆದಿತ್ತು. ಈ ಬಾರಿ ಯಾವಾಗ ಮತ್ತು ಎಷ್ಟು ಹಂತದಲ್ಲಿ ಚುನಾವಣೆ ನಡೆಯಲಿದೆ ಎಂಬ ಕುತೂಹಲಕ್ಕೆ ನಾಳೆ ಉತ್ತರ ಸಿಗಲಿದೆ. : - - – -.