ಮನೆ ಮುಂದೆ ನಿಲ್ಲಿಸಿದ್ದ ವ್ಯಾನ್ ಗೆ ದುಷ್ಕರ್ಮಿಗಳಿಂದ ಬೆಂಕಿ…. ಮೈಸೂರು,ಮಾ,16,2020(..): ಮನೆ ಮುಂದೆ ನಿಲ್ಲಿಸಿದ್ದ ಮಾರುತಿ ವ್ಯಾನ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಮಾರುತಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಶೈನ್ ಪೂವಯ್ಯ ಅವರಿಗೆ ಸೇರಿದ ಮಾರುತಿ ವ್ಯಾನ್ ಗೆ ಬೆಂಕಿ ಹಚ್ಚಲಾಗಿದೆ. ಕಿಡಿಗೇಡಿಗಳು ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದ್ದು, ಮಾರುತಿ ವ್ಯಾನ್ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. : - - – – .