ಮದುವೆ ಗಾಸಿಪ್ ಕುರಿತು ಮಾಧ್ಯಮಗಳ ವಿರುದ್ಧ ಅನುಷ್ಕಾ ಶೆಟ್ಟಿ ಬೇಸರ ನವದೆಹಲಿ, ಮಾರ್ಚ್ 13, 2020 (..):ಮದುವೆ ಗಾಸಿಪ್‍ಗಳಿಗೆ ನಟಿ ಅನುಷ್ಕಾ ಶೆಟ್ಟಿ ತಿರುಗೇಟು ನೀಡಿದ್ದಾರೆ. ಸುಳ್ಳು ಸುದ್ದಿಯನ್ನು ಯಾಕೆ ಹಬ್ಬಿಸುತ್ತಾರೆ ಗೊತ್ತಿಲ್ಲ. ಮದುವೆ ಬಗೆಗಿನ ಎಲ್ಲ ಸುದ್ದಿಗಳು ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ. ಸದ್ಯ ‘ನಿಶ್ಯಬ್ದಂ’ ಚಿತ್ರದ ಪ್ರಮೋಶನ್‍ನಲ್ಲಿ ಬ್ಯುಸಿಯಾಗಿರುವ ಅನುಷ್ಕಾ, ಮಾಧ್ಯಮದವರ ಪ್ರಶ್ನೆಗೆ ಗರಂ ಆಗಿ ಉತ್ತರಿಸಿದರು. ಈ ರೀತು ಸುಳ್ಳು ಸುದ್ದಿಗಳನ್ನು ಹೇಗೆ ಬರೆಯುತ್ತಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಒಬ್ಬರ ಬಗ್ಗೆ ಸುಳ್ಳು ಸುದ್ದಿ ಬರೆಯುವುದರಿಂದ ಅವರ ಕುಟುಂಬಕ್ಕೆ ತೊಂದರೆ ಆಗುತ್ತದೆ. ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.