ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸಿ- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ರಾಜ್ಯ ಸಂಸದರ ನಿಯೋಗದಿಂದ ಮನವಿ… ಬೆಂಗಳೂರು,ಮಾ,12,2020(..): 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿರುವ ಹಿನ್ನೆಲೆ ಇದನ್ನ ಸರಿಪಡಿಸುವಂತೆ ಕೇಂದ್ರ ಸಚಿವರು ಹಾಗೂ ರಾಜ್ಯ ಸಂಸದರ ನಿಯೋಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಮನವಿ ಸಲ್ಲಿಸಿತು. ಇಂದು ಸಂಸತ್ ಭವನದಲ್ಲಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರನ್ನ ಭೇಟಿಯಾದ ರಾಜ್ಯ ಸಂಸದರು ಹಾಗೂ ಕೇಂದ್ರ ಸಚಿವರು, ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸುವಂತೆ ಮನವಿ ಸಲ್ಲಿಸಿದರು. ಕೇಂದ್ರ ಸಚಿವರಾದ ಸದಾನಂದಗೌಡ, ಪ್ರಹ್ಲಾದ್ ಜೋಶಿ ಸೇರಿ ರಾಜ್ಯ ಸಂಸದರ ನಿಯೋಗ ಇಂದು ಮನವಿ ಸಲ್ಲಿಸಿದೆ. 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ಹೀಗಾಗಿ ಅನ್ಯಾಯ ಸರಿಪಡಿಸಿ ಹೆಚ್ಚುವರಿ ಅನುದಾನ ಒದಗಿಸುವಂತೆ ನಿಯೋಗ ಮನವಿ ಮಾಡಿದರು. : – –- - - -