ಬೈಕ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು ಮೈಸೂರು,ಮಾ,12,2020(..): ಬೈಕ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲ್ಲೂಕಿನಲ್ಲಿ ನಡೆದಿದೆ. ಕೆ.ಆರ್.ನಗರ ತಾಲೂಕಿನ ಚಿಕ್ಕಹನಸೋಗೆ ಗೇಟ್ ಬಳಿ ಈ ಘಟನೆ ನಡೆದಿದೆ. ಹನಸೋಗೆ ಗ್ರಾಮದ ಜವರೇಗೌಡ (62)ಮೃತಪಟ್ಟವರು. ಘಟನೆ ನಡೆಯುತ್ತಿದ್ದಂತೆ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೆ.ಆರ್.ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ. : . - - – – - -