ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲು..! ಬೆಂಗಳೂರು, ಮಾ.೧೫, ೨೦೨೪ : ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲು. ತಾಯೊಯೊಬ್ಬಳು ತನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ನೀಡಿದ ದೂರಿನ ಮೇರೆಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ, 2012 (ಪೋಕ್ಸೊ) ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿ ನಾಯಕನ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಫೆಬ್ರವರಿ 2, 2024 ರಂದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯ ಸಹಾಯ ಪಡೆಯಲು ತಾಯಿ ಮತ್ತು ಮಗಳು ಹೋದಾಗ ಲೈಂಗಿಕ ದೌರ್ಜನ್ಯದ ಘಟನೆ ಸಂಭವಿಸಿದೆ. ಬೆಂಗಳೂರು ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲು. ಕೃಪೆ : ಎಕನಾಮಿಕ್ಸ್‌ ಟೈಮ್ಸ್‌ : ̲ ̲ ̲ ̲ : .. ( , 2012) 17-- . , 2, 2024, ’ .