ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೆ ಕಾಂಗ್ರೆಸ್ ಗೆ ಜ್ಯೋತಿರಾದಿತ್ಯ ಸಿಂಧಿಯಾ ಗುಡ್ ಬೈ… ಭೋಪಾಲ್ ,ಮಾ,10,2020(..): ಮಧ್ಯಪ್ರದೇಶ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆದಿದ್ದು ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ಕಾಂಗ್ರೆಸ್ ನ 18 ಶಾಸಕರು ಸಿಎಂ ಕಮಲ್ ನಾಥ್ ಸರ್ಕಾರಕ್ಕೆ ಸೆಡ್ಡು ಹೊಡೆದು ಬೆಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಿದ ಬೆನ್ನಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಿಂಧಿಯಾ ರವಾನಿಸಿದ್ದಾರೆ ಎನ್ನಲಾಗಿದೆ. ಮಧ್ಯಪ್ರದೇಶದಲ್ಲಿನ ರಾಜಕೀಯ ವಿದ್ಯಮಾನಗಳ ಹಿಂದೆ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಅವರ ಕೈವಾಡವಿದೆ ಎನ್ನಲಾಗಿತ್ತು. ಇನ್ನು ರಾಜೀನಾಮೆಗೂ ಮುನ್ನ ಜ್ಯೋತಿರಾದಿತ್ಯ ಸಿಂಧಿಯಾ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿದ್ದರು. ಹೀಗಾಗಿ ಸಿಂಧಿಯಾ ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. : - – -