ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ- ಸಚಿವ ಬಿ.ಸಿ.ಪಾಟೀಲ್ ಹೇಳಿಕೆ… ಬೆಂಗಳೂರು, ಮಾ 9,2020(..): ಕೃಷಿ ಇಲಾಖೆಯ ಗ್ರೂಪ್ –ಸಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಹಾಗೂ ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ಜೆಡಿಎಸ್ ನ ಸದಸ್ಯ ಹೆಚ್.ಡಿ.ರೇವಣ್ಣ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಮೂಲಕ ಉತ್ತರಿಸಿರುವ ಸಚಿವ ಬಿ.ಸಿ, ಖಾಲಿ ಇರುವ ಹುದ್ದೆಗಳಿಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸರ್ಕಾದ ಸೌಲಭ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. 2018-19 ನೇ ಸಾಲಿನಲ್ಲಿ ಗ್ರೂಪ್-ಎ ಮತ್ತು ಬಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗಿದೆ. ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲಾಗುವುದು. ನೇರ ನೇಮಕಾತಿ ಮೂಲಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಕೃಷಿ ಇಲಾಖೆಯಲ್ಲಿ 3640 ಹುದ್ದೆಗಳು ಖಾಲಿಯಿದ್ದು, ಯ 2018-19 ನೇ ಸಾಲಿನಲ್ಲಿ ಗ್ರೂಪ್ ಎ ಮತ್ತು ಬಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗಿದೆ. ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಸಚಿವ ಬಿ.ಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಮೋಹನ್ ಭಾಗವತ್‌ ಮೇಲಿನ ಹತ್ಯೆ ಸಂಚು ಖಂಡನೀಯ … ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹತ್ಯೆ ಸಂಚು ಖಂಡನೀಯ ಎಂದು ಕೃಷಿ ಸಚಿವ ಬಿ‌.ಸಿ.ಪಾಟೀಲ್ ಹೇಳಿದ್ದಾರೆ. ವಿಧಾನಸಭೆ ಕಲಾಪಕ್ಕೂ ಮುನ್ನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ ಪಾಟೀಲ್, ರಾಷ್ಟ್ರೀಯವಾದಿಗಳ ಮೇಲಿನ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ವಿಚಾರವನ್ನು ಗುಪ್ತಚರ ಇಲಾಖೆ ನೀಡಿದೆ ಎಂಬುದು ತಿಳಿದುಬಂದಿದೆ‌. ಈ ಬಗ್ಗೆ ಗೃಹ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡುವುದಾಗಿ ಅವರು ಹೇಳಿದ್ದಾರೆ. : - – -- -..