ಭೂಗತ ಪಾತಕಿ ರವಿ ಪೂಜಾರಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ… ಬೆಂಗಳೂರು,ಮಾ,6,2020(..): ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನ ನ್ಯಾಯಾಂಗ ಬಂಧನಕ್ಕೆ ನೀಡಿ 30ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ತಿಲಕ್ ನಗರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ರವಿ ಪೂಜಾರಿಯನ್ನ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದರು. ವಿಚಾರಣೆ ಪೂರ್ಣಗೊಂಡ ಹಿನ್ನೆಲೆ ಇಂದು ರವಿಪೂಜಾರಿಯನ್ನ ಸಿಸಿಬಿ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ 30ನೇ ಎಸಿಎಂಎಂ ಕೋರ್ಟ್ ರವಿಪೂಜಾರಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಸದ್ಯ ರವಿಪೂಜಾರಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ಇನ್ನು ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ರವಿಪೂಜಾರಿ ವಿರುದ್ಧ ಆರೋಪಗಳಿವೆ. : - - – 14 -