ಸಿಎಂ ಬಿಎಸ್ ಯಡಿಯೂರಪ್ಪಗೆ 78ರ ಹುಟ್ಟುಹಬ್ಬದ ಸಂಭ್ರಮ: ಅಭಿನಂದನಾ ಸಮಾರಂಭದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್, ಮಾಜಿ ಸಿಎಂ ಸಿದ್ಧರಾಮಯ್ಯ ಭಾಗಿ… ಬೆಂಗಳೂರು, ಫೆ,27,2020(..): ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಇಂದು 78ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭವನ್ನ ಆಯೋಜಿಸಲಾಗಿದೆ. ಸಿಎಂ ಬಿಎಸ್ ಯಡಿಯೂರಪ್ಪಗೆ ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಮಾಜಿ ಸಿಎಂಗಳಾದ ಸಿದ್ಧರಾಮಯ್ಯ ಹಾಗೂ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯಾತಿಗಣ್ಯರು ಶುಭಕೋರಿದರು. ಹಾಗೆಯೇ ಇಂದು ಹುಟ್ಟುಹಬ್ಬದ ದಿನದಂದೇ ಸಿಎಂ ಬಿಎಸ್ ಯಡಿಯೂರಪ್ಪ ಅಧಿಕೃತವಾಗಿ ಕಾವೇರಿ ನಿವಾಸ ಪ್ರವೇಶಿಸಿದರು. ಈ ನಡುವೆ ಸಿಎಂ ಬಿಎಸ್ ವೈ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ನಡೆಯುತ್ತಿದ್ದು ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ಸಿಎಂಗಳಾದ ಸಿದ್ಧರಾಮಯ್ಯ, ಎಸ್.ಎಂ ಕೃಷ್ಣ, ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರ ಸಮಾಗಮವಾಗಿದೆ. ಅಭಿನಂದನಾ ಸಮಾರಂಭದಲ್ಲಿ ‘ಧಣಿವರಿಯದ ಧೀಮಂತ’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಗುತ್ತದೆ. ಯಡಿಯೂರಪ್ಪ ಸಂಪುಟದ ವಿವಿಧ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ. : 78th - – - – -