ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಖಂಡಿಸಿ ಮೈಸೂರಿನಲ್ಲೂ ಕಾಂಗ್ರೆಸ್ ಪ್ರತಿಭಟನೆ… ಮೈಸೂರು,ಫೆ,26,2020(..): ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅವರ ಬಗ್ಗೆ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಜಿಲ್ಲಾ ಕಾಂಗ್ರೆಸ್ ಘಟಕದಿಂದ ಮೈಸೂರಿನ ಗಾಂಧೀವೃತ್ತದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಪ್ರತಿಭಟನೆ ನಡೆಸಲಾಯಿತು. ಮಾಜಿ ಸಚಿವ ಡಾ. ಎಚ್. ಸಿ ಮಹದೇವಪ್ಪ, ಎಂ.ಎಲ್.ಸಿ ಧರ್ಮಸೇನಾ, ಮಾಜಿ ಶಾಸಕ ವಾಸು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್ ಸೇರಿದಂತೆ ಸ್ಥಳೀಯ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಹಿರಿಯ ಸ್ವಾತಂತ್ಯ್ರ ಸೇನಾನಿ ಎಚ್. ಎಸ್ ದೊರೆಸ್ವಾಮಿಯವರ ಬಗ್ಗೆ ಹಗುರ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪೊಲೀಸ್ ಇಲಾಖೆ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು. : - - – - - – -