ಟಾಟಾ ಏಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ: ಮೂವರು ಮಹಿಳೆಯರು ಸಾವು…. ಶಿವಮೊಗ್ಗ,ಫೆ,25,2020(..): ಟಾಟಾ ಏಸ್ ವಾಹನ ಹಾಗೂ ಖಾಸಗಿ ಬಸ್ ನಡುವೆ ಭಿಕರ ಅಪಘಾತ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಬಳಿ ಈ ಘಟನೆ ನಡೆದಿದೆ. ಟಾಟಾ ಏಸ್ ವಾಹನದಲ್ಲಿದ್ದ ಚಂದ್ರಕಲಾ (40), ಲಕ್ಷ್ಮೀ (40) ಹಾಗೂ ರೇಖಾ(45) ಮೃತಪಟ್ಟ ಮಹಿಳೆಯರು ಎಂದು ಗುರುತಿಸಲಾಗಿದೆ. ಮೃತ ಮಹಿಳೆಯರು ಜಯನಗರ ನಿವಾಸಿಗಳು ಎನ್ನಲಾಗಿದೆ. ಈ ನಡುವೆ ಮಹಿಳೆಯರು ಟಾಟಾ ಏಸ್ ನಲ್ಲಿ ಶಿಕಾರಿಪುರದಿಂದ ಕೊಪ್ಪದ ಕೆರೆಗೆ ಪೂಜೆಗೆಂದು ತೆರಳುತ್ತಿದ್ದರು ಈ ವೇಳೆ ದುರ್ಘಟನೆ ಸಂಭವಿಸಿದೆ. ಈ ಕುರಿತು ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - – - – .