ಹುಬ್ಬಳ್ಳಿ: ಸರ್ಕಾರಿ ಶಾಲೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಬರಹ: ಆಡಳಿತ ಮಂಡಳಿಯಿಂದ ದೂರು… ಹುಬ್ಬಳ್ಳಿ, ಫೆ,24,2020(..): ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಭಾರಿ ಸುದ್ದಿಯಾಗಿತ್ತು.ಇದೀಗ ಇಂತಹದ್ದೇ ಘಟನೆ ಹುಬ್ಬಳ್ಳಿಯಲ್ಲಿ ಮರುಕಳಿಸಿದೆ. ಹೌದು ಹುಬ್ಬಳ್ಳಿ ತಾಲ್ಲೂಕಿನ ಬುಡರಶಿಂಗಿ ಗ್ರಾಮದ ಸರ್ಕಾರಿ ಶಾಲೆಯ ಗೋಡೆಯ ಮೇಲೆ ದುಷ್ಕರ್ಮಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಬರಹ ಬರೆದಿದ್ದಾರೆ. ಈ ಕೈ ಬರಹದ ಸಂಬಂಧ ಸರ್ಕಾರಿ‌ ಕಿರಿಯ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿ ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ದೂರು ನೀಡಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಠಾಣಾ ಪೊಲೀಸರು ಬುಡರಶಿಂಗಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. : - – - -