ಖಾಸಗಿ ವಿಡಿಯೋ ತೋರಿಸಿ ಯುವತಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿ ಬಂಧನ… ಬೆಂಗಳೂರು,ಫೆ,23,2020(..): ಖಾಸಗಿ ವಿಡಿಯೋ ತೋರಿಸಿ ಯುವತಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನ ನಗರದ ಕೆಆರ್ ಪುರಂ ಠಾಣಾ ಪೊಲೀಸರು ಬಂಧಿಸಿದ್ದಾರೆ. ದೀಪಕ್ ಬಂಧಿತ ಆರೋಪಿ. ಈತ ಯುವತಿಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ. ಹಣ ನೀಡದಿದ್ದರೇ ಖಾಸಗಿ ವಿಡಿಯೋವನ್ನ ಹರಿಯಬಿಡುವುದಾಗಿ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಈ ಕುರಿತು ಯುವತಿ ಕೆ.ಆರ್ ಪುರಂ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಆರೋಪಿಯನ್ನ ಕೆ.ಆರ್ ಪುರಂ ಠಾಣಾ ಪೊಲೀಸರು ಬಂಧಿಸಿದ್ದು ಪ್ರಕರಣ ದಾಖಲಾಗಿದೆ. : - - – -