ಶಾಂತಿ ಕದಡಲು ಬಿಡುವುದಿಲ್ಲ, ಯಾವುದೇ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ದ: ಬಸವರಾಜ ಬೊಮ್ಮಾಯಿ ಬೆಂಗಳೂರು, ಫೆಬ್ರವರಿ 22, 2020 (..):ಯಾವುದೇ ಕಾರಣಕ್ಕೂ ಶಾಂತಿಪ್ರಿಯ ಕರ್ನಾಟಕದಲ್ಲಿ ಶಾಂತಿ ಕದಡಲು ಬಿಡುವುದಿಲ್ಲ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸರ್ವಸನ್ನದ್ದವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪಾಕ್ ಪರ ಘೋಷಣೆ ಹಾಗೂ ಫ್ರಿ ಕಾಶ್ಮೀರ್ ಪೋಸ್ಟರ್ ಪ್ರದರ್ಶನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ . ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಲು ಅಂತಾರಾಷ್ಟ್ರೀಯ ಮಟ್ಟದಲ್ಲು ಷಡ್ಯಂತ್ರ ನಡೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.