ಕೇರಳಾ ಸರ್ಕಾರಿ ಬಸ್ ಮತ್ತು ಕಂಟೇನರ್ ನಡುವೆ ಭೀಕರ ಅಪಘಾತ: 20 ಮಂದಿ ಸಾವು… ಚೆನ್ನೈ, ಫೆ.20,2020(..): ತಮಿಳುನಾಡಿನ ತಿರ್ಪೂರು ಜಿಲ್ಲೆಯ ಅವಿನಾಶಿ ಪಟ್ಟಣದ ಬಳಿ ಕೇರಳಾ ಸರ್ಕಾರಿ ಬಸ್ ಮತ್ತು ಕಂಟೇನರ್ ನಡುವೆ ಡಿಕ್ಕಿಯಾಗಿ 20 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಕೊಯಂಬತ್ತೂರು- ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಬೆಂಗಳೂರಿನಿಂದ ಎರ್ನಾಕುಲಂಗೆ ತೆರಳುತ್ತಿತ್ತು ಎನ್ನಲಾಗಿದೆ. ಕಳೆದ ರಾತ್ರಿ ಬೆಂಗಳೂರಿನಿಂದ ಹೊರಟಿದ್ದ ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮುಂಜಾನೆ ಅವಿನಾಶಿ ಬಳಿ ವೇಗವಾಗಿ ಚಲಿಸುವಾಗ ರಸ್ತೆ ಬದಿ ನಿಂತಿದ್ದ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ 20 ಮಂದಿ ಮೃತಪಟ್ಟಿದ್ದು ಹಲವರು ಗಂಭೀರ ಗಾಯಗೊಂಡಿದ್ದಾರೆ. ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಪಾಲಕ್ಕಾಡ್, ತ್ರಿಶೂರ್ ಮತ್ತು ಎರ್ನಾಕುಲಂ ಮೂಲದವರು ಎಂದು ಕೇರಳಾ ಸಾರಿಗೆ ಸಚಿವರು ಮಾಹಿತಿ ನೀಡಿದ್ದಾರೆ. : - – - – -20