ಬಾದಾಮಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಮೀಸಲಿಡುವಂತೆ ಸಿಎಂ ಬಿಎಸ್ ವೈಗೆ ಮಾಜಿ ಸಿಎಂ ಸಿದ್ಧರಾಮಯ್ಯ ಪತ್ರ… ಬೆಂಗಳೂರು,ಫೆ,19,2020(..): ಬಜೆಟ್ ನಲ್ಲಿ ಬಾದಾಮಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಬಾದಾಮಿ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಅನುದಾನ ಬೇಕು. ಕ್ಷೇತ್ರದ ಅಭಿವೃದ್ದಿಗೆ 250 ಕೋಟಿಗೂ ಹೆಚ್ಚು ಅನುದಾನದ ಅಗತ್ಯವಿದೆ. ಹೀಗಾಗಿ ಬಜೆಟ್ ನಲ್ಲಿ ಬಾದಾಮಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿರಿಸಿ ಎಂದು ಸಿಎಂ ಬಿಎಸ್ ವೈಗೆ ಬರೆದಿರುವ ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ. ನಿನ್ನೆ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಬಿಎಸ್ ವೈ ಭೇಟಿಯಾಗಿದ್ದರು. ಈ ವೇಳೆಯೂ ಬಾದಾಮಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನದ ಬಗ್ಗೆ ಪ್ರಸ್ತಾಪ ಮಾಡಿದ್ದರು ಎನ್ನಲಾಗಿದೆ. ಮಾರ್ಚ್​ 5ರಂದು ಬಜೆಟ್​ ಮಂಡನೆಗೆ ಸಿಎಂ ಬಿಎಸ್​ ಯಡಿಯೂರಪ್ಪ ಸಿದ್ದವಾಗಿದ್ದು, ಇದಕ್ಕೂ ಮುನ್ನವೇ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಸಮರ ನಡೆಸಿದ್ದಾರೆ. : - – - – – .