ಸಿಗ್ನಲ್ ಜಂಪ್ ಮಾಡಲು ಹೋದ ವೇಳೆ ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು… ಮೈಸೂರು,ಫೆ,19,2020(..): ಸಿಗ್ನಲ್ ಜಂಪ್ ಮಾಡಲು ಹೋಗಿ ವ್ಯಕ್ತಿ ಪ್ರಾಣ ಕಳೆದುಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಆಕಾಶವಾಣಿ ಸಿಗ್ನಲ್ ಬಳಿ ಈ ಘಟನೆ ನಡೆದಿದೆ. ಸಿಗ್ನಲ್ ಜಂಪ್ ಮಾಡಲು ಹೋದ ವೇಳೆ ಮಿನಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಎಸ್.ಎಸ್.ಟೆಕ್ನಾಲಜಿ ಸಂಸ್ಥೆಗೆ ಸೇರಿದ ಮಿನಿ ಬಸ್ ಕೆಆರ್ ಎಸ್ ಕಡೆಯಿಂದ ಬರುತ್ತಿತ್ತು. ಈ ವೇಳೆ ಬೈಕ್ ಸವಾರ ಸಿಗ್ನಲ್ ಜಂಪ್ ಮಾಡಲು ಯತ್ನಿಸಿದ್ದು ಈ ಸಮಯದಲ್ಲಿ ಬೈಕ್ ಸವಾರನ ತಲೆ ಮೇಲೆ ಬಸ್ ಹರಿದಿದೆ. ಬೈಕ್ ಸವಾರ ಹೆಲ್ಮೇಟ್ ಧರಿಸದೆ ಬೈಕ್ ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ. ಮೃತ ದೇಹವನ್ನ ಕೆ.ಆರ್. ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಕುರಿತು ವಿವಿ ಪುರಂ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - –-