ನಾನು ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿಗೆ ಮತ ಹಾಕಿದ್ದೇನೆ- ಮಾಜಿ ಸಚಿವ ಜಿ.ಟಿ ದೇವೇಗೌಡ ಹೇಳಿಕೆ… ಬೆಂಗಳೂರು,ಫೆ,17,2020(..): ಇಂದು ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿಗೆ ಮತ ಚಲಾಯಿಸಿದ್ದೇನೆ ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಜಿ.ಟಿ ದೇವೇಗೌಡ, ನಾನು ಶಾಸಕನಾಗಿ ನನ್ನ ಹಕ್ಕು ಚಲಾಯಿಸಿದ್ದೇನೆ. ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್ ಕಣದಿಂದ ಹಿಂದೆ ಸರಿದಿದ್ದಾರೆ. ಕಣದಲ್ಲಿದ್ದುದ್ದು ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಮಾತ್ರ. ಹೀಗಾಗಿ ಅವರಿಗೆ ಮತ ಹಾಕಿದ್ದೇನೆ. ರಾಜ್ಯದ ಹಿತದೃಷ್ಠಿಯಿಂದ ಲಕ್ಷ್ಮಣ್ ಸವದಿಗೆ ಮತ ಚಲಾಯಿಸಿದ್ದೇನೆ ಎಂದರು. ಹೆಚ್.ಡಿ ದೇವೇಗೌಡರ ಜತೆ ಯಾವುದೇ ಅಸಮಾಧಾನವಿಲ್ಲ. ನಾನು ನಿಖಿಲ್ ಎಂಗೇಜ್ ಮೆಂಟ್ ಗೆ ಹೋಗಿದ್ದೆ. ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಬಗ್ಗೆ ಮಾಹಿತಿ ಇರಲಿಲ್ಲ. ಹೀಗಾಗಿ ಶಾಸಕಾಂಗ ಪಕ್ಷದ ಸಭೆಗೆ ಹೋಗಿರಲಿಲ್ಲ ಎಂದು ಜಿ.ಟಿ ದೇವೇಗೌಡರು ತಿಳಿಸಿದ್ದಾರೆ. : - - - -