ಪಾಕ್ ಪರ ಘೋಷಣೆ ಕೇಸ್: ಮೂವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ.. ಹುಬ್ಬಳ್ಳಿ,ಫೆ,17,2020(..): ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದಷ್ಟೆ ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಜಮ್ಮಕಾಶ್ಮೀರ ಮೂಲದ ವಿದ್ಯಾರ್ಥಿಗಳಾದ ಅಮೀರ್, ಬಾಸಿತ್, ತಾಲಿಬ್ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ನಂತರ ಮೂವರು ವಿದ್ಯಾರ್ಥಿಗಳನ್ನ ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದರು. ಬಿಡುಗಡೆ ಮಾಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ಪೊಲೀಸರು ನಿನ್ನೆ ರಾತ್ರಿ ಮೂವರು ಆರೋಪಿಗಳನ್ನ ಬಂಧಿಸಿ ಇಂದು ಹುಬ್ಬಳ್ಳಿಯ 3ನೇ ಜೆಎಂಎಫ್ ಸಿ ಕೋರ್ಟ್ ಗೆ ಹಾಜರು ಪಡಿಸಿದ್ದರು. ಜೆಎಂಎಫ್ ಸಿ ಕೋರ್ಟ್ ನ್ಯಾಯಾಧೀಶೆ ಜೆ.ಪುಷ್ಪಾ ಅವರು ಮೂವರು ಆರೋಪಿಗಳೀಗೆ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. : - –- - 14 - – .