ಸ್ನಾನಕ್ಕೆಂದು ಕಾವೇರಿ ನದಿಗೆ ಇಳಿದಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು… ಮಂಡ್ಯ,ಫೆ,14,2020(..): ಕಾವೇರಿ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಶಂಬುಲಿಂಗಯ್ಯನ ಕಟ್ಟೆ ಬಳಿ ಕಾವೇರಿ ನದಿಯಲ್ಲಿ ಈ ಘಟನೆ ನಡೆದಿದೆ. ಇಫ್ತಿಕಾರ್(18) ಮುದಾಕಮ್(18), ತೌಫಿಕ್(19) ಮೃತಪಟ್ಟವರು ಎಂದು ಗುರುತಿಸಲಾಗಿದೆ ಮೂವರು ವಿದ್ಯಾರ್ಥಿಗಳು ಸ್ನಾನ್ನಕೆಂದು ಕಾವೇರಿ ನದಿಗೆ ಇಳಿದಿದ್ದರು ಈ ವೇಳೆ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸದ್ಯ ಓರ್ವ ವಿದ್ಯಾರ್ಥಿಯ ಶವ ಪತ್ತೆಯಾಗಿದ್ದು, ಮತ್ತಿಬ್ಬರ ವಿದ್ಯಾರ್ಥಿಗಳ ಮೃತದೇಹ ಪತ್ತೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ. ಈ ಕುರಿತು ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - - -