ಲೋಕಸಭೆ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಗೆಲುವು ನಿಶ್ಚಿತ- ಸಚಿವ ಮಧು ಬಂಗಾರಪ್ಪ ವಿಶ್ವಾಸ. ಶಿವಮೊಗ್ಗ,ಮಾರ್ಚ್,11,2024(..):ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪರ ಉತ್ತಮ ವಾತಾವರಣವಿದೆ. ಶಿವಮೊಗ್ಗದಲ್ಲಿ ಗೀತಾ ಶಿವರಾಜ್ ಕುಮಾರ್ ಗೆಲುವು ನಿಶ್ಚಿತ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್ ನ ಗ್ಯಾರಂಟಿಗಳು ಚುನಾವಣೆಯಲ್ಲಿ ಪ್ಲಸ್ ಆಗಲಿವೆ. ಜನರಿಗೆ ನೀಡುತ್ತಿರುವ ಗ್ಯಾರಂಟಿಗಳಿಂದಾಗಿ ವಾತಾವರಣ ಚೆನ್ನಾಗಿದೆ. ಅನೇಕರು ಸ್ವಯಂಪ್ರೇರಿತರಾಗಿ ಪ್ರಚಾರಕ್ಕೆ ಬರುವುದಾಗಿ ಹೇಳುತ್ತಿದ್ದಾರೆ. ಆಯಾಯಾ ಕ್ಷೇತ್ರಗಳಲ್ಲಿ ಶಾಸಕರು ಹಾಗೂ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಿಗೆ ಜವಾಬ್ದಾರಿ ನೀಡಲಾಗುತ್ತದೆ ಎಂದು ತಿಳಿಸಿದರು. ಹಿಂದೆ ಜೆಡಿಎಸ್ ನಿಂದ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ ಮಾಡಿದ್ದರು. ನಾನೂ ಕೂಡ ಸ್ಪರ್ಧೆ ಮಾಡಿದ್ದೆ. ಆದರೆ ವಾತಾವರಣ ಪೂರಕವಾಗಿರಲಿಲ್ಲ. ಆದರೆ ಈ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿರುವುದರಿಂದ ಗೆಲುವು ಸಾಧ್ಯವಾಗಲಿದೆ . ಗೀತಾ ಶಿವರಾಜ್ ಕುಮಾರ್ ಗೆಲ್ಲುವ ವಿಶ್ವಾಸವಿದೆ ಎಂದರು. ಸಂಸದ ಬಿವೈ ರಾಘವೇಂದ್ರ ವಿರುದ್ದ ವಾಗ್ದಾಳಿ ನಡೆಸಿದ ಮಧು ಬಂಗಾರಪ್ಪ, ಬಿವೈ ರಾಘವೇಂದ್ರ ಮೊದಲ ಸಲ ಚುನಾವಣೆ ಮಾಡಿದ್ದು ಹಣದಿಂದ. ಮಾಜಿ ಸಿಎಂ ಪುತ್ರ ಎಂಬ ಹೆಸರಿನಲ್ಲಿ ಗೆದ್ದರು. ಆ್ಯಂಬುಲೆನ್ಸ್ ಪೊಲೀಸ್ ವಾಹನದಲ್ಲಿ ಹಣ ಪೂರೈಸಿದ್ದರು ಎಂದು ಆರೋಪಿಸಿದರು. : -- ---