ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಸುದೀಪ್ ನೋಡಲು ಜನ ಜಾತ್ರೆ ! ದಾವಣಗೆರೆ, ಫೆಬ್ರವರಿ 10, 2020 (..):ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ನಟ ಸುದೀಪ್ ಪಾಲ್ಗೊಂಡಿದ್ದರು. ನೆಚ್ಚಿನ ನಟ ಜಾತ್ರೆಗೆ ಆಗಮಿಸುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಕಾರ್ಯಕ್ರಮ ವೇದಿಕೆಗೆ ಆಗಮಿಸಿದ ಸುದೀಪ್​ರನ್ನು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಶ್ರೀಗಳು ಸನ್ಮಾನಿಸಿದರು. ವೀರ ಮದಕರಿ ಚಿತ್ರದ ಡೈಲಾಗ್ ಮೂಲಕ ಕಾರ್ಯಕ್ರಮಕ್ಕೆ ಸುದೀಪ್ ಕಿಚ್ಚು ಹತ್ತಿಸಿದರು. ಬಳಿಕ ವಾಸುಕಿ ವೈಭವ್ ನ​ ಹಾಡುನ್ನು ಹಾಡಿ ರಂಜಿಸಿದರು. ಸುದೀಪ್ ಬರುವ ವೇಳೆ ಅಭಿಮಾನಿಗಳಿಂದ ನೂಕು ನುಗ್ಗಲು ಉಂಟಾಯಿತು.‌ ಬ್ಯಾರಿಕೇಡ್ ತಳ್ಳಿ ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.