ಟ್ಯಾಂಕರ್ ಡಿಕ್ಕಿ: ಕಾರಿನಲ್ಲಿದ್ದ ಇಬ್ಬರು ದುರ್ಮರಣ… ದಕ್ಷಿಣ ಕನ್ನಡ,ಫೆ,9,2020(..): ಟ್ಯಾಂಕರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಪುತ್ತೂರು ತಾಲ್ಲೂಕಿನ ಬೆದ್ರೋಡಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ. ನೆಲ್ಯಾಡಿ ಮೂಲದ ಝೈನಿ ಶಾಜಿ(30), ಜೀಸಾನ್(40) ಮೃತಪಟ್ಟವರು. ಕಾರಿಗೆ ಟ್ಯಾಂಕರ್ ಡಿಕ್ಕಿಯಾಗಿ ಈಘಟನೆ ನಡೆದಿದೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - – -