ನೂತನ ಸಚಿವರಿಗೆ ಕಿವಿಮಾತು: ಶನಿವಾರದೊಳಗೆ ಖಾತೆ ಹಂಚಿಕೆ ಮಾಡುವುದಾಗಿ ತಿಳಿಸಿದ ಸಿಎಂ ಬಿಎಸ್ ಯಡಿಯೂರಪ್ಪ…. ಬೆಂಗಳೂರು,ಫೆ,6,2020(..): ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ 10 ಮಂದಿ ಸಚಿವರಿಗೆ ಶನಿವಾರದೊಳಗೆ ಖಾತೆ ಹಂಚಿಕೆ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಬಳಿಕ ಮಾಧ್ಯಮದ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, 10 ಮಂದಿ ಸಚಿವರಿಗೆ ಶನಿವಾರದೊಳಗೆ ಖಾತೆ ಹಂಚಿಕೆ ಮಾಡಲಾಗುತ್ತದೆ. ಈ ಸಂಬಂಧ ಸಾಧ್ಯವಾದರೇ ಮತ್ತೊಮ್ಮೆ ದೆಹಲಿಗೆ ಹೋಗಿ ಬರುತ್ತೇನೆ ಎಂದರು. ಶಾಸಕ ಉಮೇಶ ಕತ್ತಿಗೆ ಸಚಿವ ಸ್ಥಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಉಮೇಶ್ ಕತ್ತಿ ಜತೆ ನಿನ್ನೆ ನಾನು ಮಾತನಾಡಿದ್ದೇನೆ. ಕತ್ತಿ ಸಚಿವರಾಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದರು. ನೂತನ ಸಚಿವರಿಗೆ ಸಿಎಂ ಬಿಎಸ್ ವೈ ಕಿವಿಮಾತು… ಸಚಿವರಾಗಿ ಇಂದು ತಮ್ಮ ಸಂಪುಟಕ್ಕೆ ಸೇರ್ಪಡೆಯಾದ 10 ಮಂದಿಗೆ ಸಿಎಂ ಬಿಎಸ್ ಯಡಿಯೂರಪ್ಪ ಕಿವಿಮಾತು ಹೇಳಿದ್ದಾರೆ. ನಿಮ್ಮ ಸಹಕಾರದಿಂದ ನಮ್ಮ ಸರ್ಕಾರ ರಚನೆಯಾಗಿದೆ. ಕೊಟ್ಟ ಮಾತಿನಂತೆ ನಿಮ್ಮನ್ನ ಸಚಿವರನ್ನಾಗಿ ಮಾಡಿದ್ದೇನೆ. ನಿಮಗಾಗಿ ಹಲವರ ವಿರೋಧ ಕಟ್ಟಿಕೊಂಡಿದ್ದೇನೆ. ಯಾವಕಾರಣಕ್ಕೂ ಮಂತ್ರಿ ಸ್ಥಾನದಲ್ಲಿ ಕೂತು ಯಾಮಾರಬೇಡಿ. ವಿರೋಧಿಗಳ ಬಾಯಿಗೆ ಆಹಾರವಾಗಬೇಡಿ. ಕಿವಿಮಾತು ಹೇಳಿದ್ದಾರೆ. : – -