ವಿಧಾನಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಡಿಸಿಎಂ ಲಕ್ಷ್ಮಣ್ ಸವದಿ ನಾಮಪತ್ರ ಸಲ್ಲಿಕೆ… ಬೆಂಗಳೂರು, ಫೆ.5,2020(..): ಫೆಬ್ರವರಿ 17 ರಂದು ನಡೆಯಲಿರುವ ವಿಧಾನಪರಿಷತ್ ನ ಒಂದು ಸ್ಥಾನದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಡಿಸಿಎಂ ಲಕ್ಷ್ಮಣ್ ಸವದಿ ನಾಮಪತ್ರ ಸಲ್ಲಿಸಿದರು. ವಿಧಾನಸಭೆಯಿಂದ ವಿಧಾನಪರಿಷತ್‍ನ ಒಂದು ಸ್ಥಾನದ ಚುನಾವಣೆಗೆ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ಉಪಮುಖ್ಯಮಂತ್ರಿ ಲಕ್ಷ್ಮಣಸವದಿ ಇಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು. ಶಾಸಕ ರಿಜ್ವಾನ್ ಅರ್ಷಾದ್ ರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಫೆಬ್ರವರಿ 17 ರಂದು ಮತದಾನ ನಡೆಯಲಿದೆ. ಡಿಸಿಎಂ ಲಕ್ಷ್ಮಣ್ ಸವದಿ ಫೆಬ್ರವರಿ 26ರೊಳಗೆ ಶಾಸನಸಭೆಯ ಸದಸ್ಯರಾಗಬೇಕಿದೆ. ಇನ್ನು ಶುಕ್ರವಾರ ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಸೋಮವಾರ ನಾಮಪತ್ರ ಹಿಂಪಡೆಯಲು ಕಡೆಯ ದಿನಾಂಕವಾಗಿದೆ. ಬಿಜೆಪಿ 117 +1 ಬಲ ಹೊಂದಿದ್ದು ಹೀಗಾಗಿ ಡಿಸಿಎಂ ಲಕ್ಷ್ಮಣ್ ಸವದಿ ಗೆಲುವು ಬಹುತೇಕ ಖಚಿತವಾಗಿದೆ. : -- - – -