ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಮಂಜುನಾಥ್ ನಿಧನಕ್ಕೆ ಸಿಎಂ ಬಿಎಸ್ ವೈ ಸಂತಾಪ … ಬೆಂಗಳೂರು, ಫೆ,3,2020(..): ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸರಳತೆ, ಸಜ್ಜನಿಕೆಯ ರಾಜಕಾರಣಿಯಾಗಿದ್ದ ಡಿ. ಮಂಜುನಾಥ್ ಅವರು ಅರಣ್ಯ, ಕಾರ್ಮಿಕ, ಯೋಜನೆ, ಪ್ರಾಥಮಿಕ ಶಿಕ್ಷಣ, ಉನ್ನತ ಶಿಕ್ಷಣ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ವಿಧಾನ ಪರಿಷತ್ತಿನ ಸಭಾಪತಿಯಾಗಿ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದರು. ಇವರ ನಿಧನದಿಂದ ಮೌಲ್ಯಾಧಾರಿತ ರಾಜಕಾರಣದ ಪೀಳಿಗೆಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಅವರು ವಿಷಾದಿಸಿದ್ದಾರೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಬಂಧು ವರ್ಗ, ಅನುಯಾಯಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. (93), . . , . was1967 Hiriyur1972 * & * & * * ( & )* * * : - (93)- - - .