ಮೈಸೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು… ಮೈಸೂರು,ಫೆ,4,2020(..): ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮೈಲಾಂಬೂರು ಗ್ರಾಮದ ರೈತ ಸೂರೇಗೌಡ (55) ಪಟ್ಟವರು. ರೈತ ಸೂರೇಗೌಡ ಪಿರಿಯಾಪಟ್ಟಣದ ಕಾವೇರಿ ಗ್ರಾಮೀಣ ಬ್ಯಾಂಕ್‌ನಲ್ಲಿ 3 ಲಕ್ಷ ಸಾಲ ಮಾಡಿದ್ದರು. ಎಲ್ಲಾ ಹಣವನ್ನು ಕೃಷಿಗಾಗಿ ಬಳಸಿದ್ದರು. ಆದರೆ ಬೆಳೆ ಕೈ ಕೊಟ್ಟ ಹಿನ್ನೆಲೆ ರೈತ ಸೂರೇಗೌಡ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - –