ಲೋಕಸಭೆ ಟಿಕೆಟ್ ನೀಡದಿದ್ದರೇ ನನಗೆ, ನಮ್ಮ ಕಾರ್ಯಕರ್ತರಿಗೆ ನೋವಾಗುತ್ತೆ- ಡಿ.ವಿ ಸದಾನಂದಗೌಡ. ಬೆಂಗಳೂರು, ಮಾರ್ಚ್,9,2024(..):ಲೋಕಸಭೆ ಚುನಾವಣೆಯಲ್ಲಿ ನಾನು ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಟಿಕೆಟ್ ನೀಡದಿದ್ದರೇ ನನಗೆ ಮತ್ತು ನಮ್ಮ ಕಾರ್ಯಕರ್ತರಿಗೆ ನೋವಾಗುತ್ತೆ ಎಂದು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ವಿ ಸದಾನಂದಗೌಡ, ನನಗೂ ಟಿಕೆಟ್ ನೀಡದಿದ್ದರೇ ನೋವಾಗುತ್ತದೆ. ಯಾವುದೇ ಹೊಸ ಪ್ರಯೋಗ ಮಾಡಬೇಡಿ. ಹೊಸ ಪ್ರಯೋಗ ಈಗಾಗಲೇ ಫೇಲ್ ಆಗಿದೆ. ಮತ್ತೆ ಹೊಸ ಪ್ರಯೋಗ ಮಾಡಬೇಡಿ. ನಮ್ಮ ಕಾರ್ಯಕರ್ತರಿಗೂ ನೋವಾಗುತ್ತೆ. ನನಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು. ‘ಈ ಹಿಂದೆ ಬೇರೆಯವರಿಗೆ ಟಿಕೆಟ್ ಕೊಡಿ ಎಂದು ಹೇಳಿದ್ದೆ. ಕ್ಷೇತ್ರದ ಎಲ್ಲ ಶಾಸಕರು, ಮುಖಂಡರು ನೀವೇ ಸ್ಪರ್ಧಿಸುವಂತೆ ಒತ್ತಾಯ ಮಾಡಿದ್ದಾರೆ. ಇನ್ನೂ ನಾನು ಹತ್ತು ವರ್ಷ ರಾಜಕೀಯದಲ್ಲಿರಬಹುದು. ಒಂದು ವೇಳೆ ನನಗೆ ಟಿಕೆಟ್ ಕೊಡದಿದ್ರೆ, ಸ್ವಲ್ಪ ನೋವಾಗುತ್ತದೆ. ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ, ಬಿಜೆಪಿ ನನಗೆ ಎಲ್ಲವೂ ಕೊಟ್ಟಿದೆ ಎಂದು ಡಿ.ವಿ ಸದಾನಂದಗೌಡ ತಿಳಿಸಿದರು. : – -- – .