ಶಿಕ್ಷಣ ಸಚಿವರ ಮನವಿಗೆ ಸ್ಪಂದಿಸಿ ಪ್ರತಿಭಟನೆ ಕೈ ಬಿಟ್ಟ ಬಿಸಿಯೂಟ ಕಾರ್ಯಕರ್ತೆಯರು… ಬೆಂಗಳೂರು,ಫೆ,3,2020(..): ಕನಿಷ್ಟ ವೇತನ ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಸಿಯೂಟ ಕಾರ್ಯಕರ್ತೆಯರು ಇದೀಗ ಪ್ರತಿಭಟನೆಯನ್ನ ವಾಪಸ್ ಪಡೆದಿದ್ದಾರೆ. ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಜಾರಿ, ಈ ನೌಕರರನ್ನು ಡಿ ಗ್ರೂಪ್ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಬಿಸಿಯೂಟ ಕಾರ್ಯಕರ್ತೆಯರು ಧರಣಿ ನಡೆಸುತ್ತಿದ್ದರು. ಸಾವಿರಾರು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ಮಧ್ಯೆ ಬೇಡಿಕೆ ಈಡೇರಿಕೆ ಸಂಬಂಧ ಬಿಸಿಯೂಟ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳ ಜತೆ ಫೆಬ್ರವರಿ 13 ರಂದು ಪ್ರತಿಭಟನೆ ನಡೆಸುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭರವಸೆ ನೀಡಿದ್ದು ಈ ಹಿನ್ನೆಲೆ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆಯನ್ನ ವಾಪಸ್ ಪಡೆದಿದ್ದಾರೆ. :- - –-