ಇಂದು ಕೇಂದ್ರ ಬಜೆಟ್: ಬಜೆಟ್ ಮಂಡನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ…. ನವದೆಹಲಿ,ಫೆ,1,2020(..): 2020-21ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಕೇಂದ್ರ ವಿತ್ತ ಖಾತೆ ಸಚಿವ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನಕ್ಕೆ ತೆರಳಿ ಬಜೆಟ್ ಮಂಡನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಅನುಮೋದನೆ ಪಡೆದರು. ಬಳಿಕ ನಿರ್ಮಲಾ ಸೀತಾರಾಮನ್ ಸಂಸತ್ ಭವನಕ್ಕೆ ಆಗಮಿಸಿದ್ದಾರೆ. ಇನ್ನು ಇಂದು ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಬೆಳಗ್ಗೆ 11 ಗಂಟೆಗೆ 2020-21ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೆ ಮುನ್ನ ಸಂಸತ್ತು ಭವನದಲ್ಲಿ ಸಂಪುಟ ಸಭೆ ನಡೆಯಲಿದೆ. ಕೇಂದ್ರ ಬಜೆಟ್ ಮೇಲೆ ದೇಶದ ಜನರಿಗೆ ಹೆಚ್ಚಿನ ನಿರೀಕ್ಷೆ ಇದೆ. : - –- - - –