ಮೂರು ವಾಹನಗಳ ನಡುವೆ ಭೀಕರ ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಸಾವು… ಹಾಸನ,ಜ,30,2020(..): ಮೂರು ವಾಹನಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಸೂಳೆಕೆರೆ ಗೇಟ್ ಬಳಿ ಬೆಂಗಳೂರು- ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಈ ಘಟನೆ ನಡೆದಿದೆ. ಬಸವರಾಜು (48), ಯಲ್ಲಯ್ಯ (50) ಹಾಗೂ ರಮೇಶ್(24 ) ಮೃತಪಟ್ಟವರು ಎಂದು ಹೇಳಲಾಗುತ್ತಿದೆ. ಕೆ ಎಸ್ ಆರ್ ಟಿಸಿ ಮತ್ತು ಎರಡು ಗೂಡ್ಸ್ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಈ ಘಟನೆ ನಡೆದಿದೆ. ಇನ್ನು ಘಟನೆಯಲ್ಲಿ 11ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಈ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ. : -- - - - .