ಎಷ್ಟೇ ಆಗಲಿ ಬಿಜೆಪಿಗರ ಜೀನ್ ಪಾಕಿಸ್ತಾನದಲ್ಲವೇ- ಮಿಣಿಮಿಣಿ ಪೌಡರ್ ಟ್ರೋಲ್ ಗೆ ಟ್ವಿಟ್ಟರ್ ನಲ್ಲಿ ಕಿಡಿಕಾರಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ… ಬೆಂಗಳೂರು,ಜ,27,2020(..): ಮಿಣಿ ಮಿಣೀ ಪೌಡರ್ ಶಬ್ದವನ್ನ ಟ್ರೋಲ್ ಮಾಡಿದಕ್ಕೆ ಬಿಜೆಪಿ ವಿರುದ್ದ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಎಷ್ಟೇ ಆಗಲಿ ಬಿಜೆಪಿಗರ ಜೀನ್ ಪಾಕಿಸ್ತಾನದಲ್ಲವೇ. ಮಿಣಿ ಮಿಣಿ ಶಬ್ದದ ಇಟ್ಟುಕೊಂಡು ಬಿಜೆಪಿ ಹೇಡಿಗಳ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿ ಬಿಜೆಪಿ ವಿರುದ್ದ ಆಕ್ರೋಶ ಹೊರ ಹಾಕಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಗ್ರಾಮೀಣ ಕನ್ನಡದಲ್ಲಿ ಹೊಳೆಯುವ ಪದಾರ್ಥಕ್ಕೆ ಮಿಣಿ ಮಿಣಿ ಎನ್ನಲಾಗುತ್ತದೆ. ಅದು ಶುದ್ಧ ಕನ್ನಡ, ಗ್ರಾಮೀಣ ಪದ. ಅದನ್ನೇ ಅಪಮಾನಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದರೆ ಅದು ಕನ್ನಡಕ್ಕೆ, ಗ್ರಾಮೀಣ ಕರ್ನಾಟಕ್ಕೆ ಮಾಡಿದ ಅಪಮಾನ. ಎಷ್ಟೇ ಆಗಲಿ ಬಿಜೆಪಿಗರ ಜೀನ್ ಪಾಕಿಸ್ತಾನದಲ್ಲವೇ. ಅದಕ್ಕೆ ಅವರಿಗೆ ಕನ್ನಡದ ಪದಗಳು ತಾತ್ಸಾರ ಎಂದು ಹರಿಹಾಯ್ದಿದ್ದಾರೆ. ಇನ್ನೊಂದು ಟ್ವಿಟ್ ಮಾಡಿ ಬಿಜೆಪಿಗೆ ಟಾಂಗ್ ಕೊಟ್ಟ ಹೆಚ್.ಡಿ ಕುಮಾರಸ್ವಾಮಿ, ಮಿಣಿ ಮಿಣಿ ಶಬ್ದ ಇಟ್ಟುಕೊಂಡು ಬಿಜೆಪಿ ಹೇಡಿತನ ಕೆಲಸ ಮಾಡುತ್ತಿದೆ. ಅಪಹಾಸ್ಯ ತಂತ್ರದ ಮೂಲಕ ನಾಯಕನ ಹನನಕ್ಕೆ ನಿಲ್ಲುತ್ತಿದೆ. ದೇಶದಲ್ಲಿ ಇಂದು ನಡೆಯುತ್ತಿರುವುದು ಕುಟಿಲ ರಾಜಕಾರಣ ಎಂದು ಕಿಡಿಕಾರಿದರು. ಹಾಗೆಯೇ ಮತ್ತೊಂದು ಟ್ವಿಟ್ಟರ್ ನಲ್ಲಿ ನಾನು ಸುಳ್ಳಾಡಿಲ್ಲ, ನಿಂದನಾತ್ಮಕ ಪದ ಬಳಸಿಲ್ಲ. ಪತ್ರಿಕೆಯೊಂದರ ವರದಿ ಓದಿ ಸತ್ಯ ಮಾತನಾಡಿದ್ದೇನೆ. ಆದಿತ್ಯರಾವ್ ಎಂಬ ಉಗ್ರನ ರಕ್ಷಣೆಗೆ ನಿಂತಿರುವ ಬಿಜೆಪಿ ನನ್ನ ಸತ್ಯದ ಮಾತನ್ನೇ ಗೇಲಿ ಮಾಡುತ್ತಿದೆ. ಬಿಜೆಪಿ ಸತ್ಯ ಧರ್ಮಗಳ ವಿರೋಧಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗುಡುಗಿದರು. : - - --- -