ಮೈಸೂರಿನ ಕೆ.ವಿಸಂಪತ್ ಕುಮಾರ್ ದಂಪತಿಗೆ ಪದ್ಮಶ್ರೀ ಪ್ರಶಸ್ತಿ ಮೈಸೂರು, ಜ.25, 2020 : (.. ) : ಮೈಸೂರು ಮೂಲದ ‘ ಸುಧರ್ಮ ಪತ್ರಿಕೆ ‘ ಸಂಪಾದಕ ಕೆ.ವಿ. ಸಂಪತ್ ಕುಮಾರ್ ಹಾಗೂ ಅವರ ಪತ್ನಿ ವಿದುಷಿ ವಿಜಯಲಕ್ಷ್ಮಿ ಕೆ.ಎಸ್. ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಸುಧರ್ಮ ಪತ್ರಿಕೆ ಭಾರತದ ಏಕೈಕ ಸಂಸ್ಕೃತ ಪತ್ರಿಕೆ ಎಂಬ ಹೆಗ್ಗಳಿಕೆ ಹೊಂದಿದ್ದು, ಕಳೆದ ಕೆಲ ವರ್ಷಗಳಿಂದ ನಿರಂತರ ಮುದ್ರಣ ಕಾಣುತ್ತಿದೆ. ಪತ್ರಿಕೆಯ ಈ ಸಾಧನೆ ಗುರುತಿಸಿ ಸಂಪಾದಕರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಮುಖ್ಯಮಂತ್ರಿ ಅಭಿನಂದನೆ ಈ ಬಾರಿಯ ಪದ್ಮ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಹಾಜಬ್ಬ ಹಾಗೂ ಉತ್ತರ ಕನ್ನಡ ಜಿಲ್ಲೆಯ ತುಳಸಿ ಗೌಡ ಅವರನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಭಿನಂದಿಸಿದ್ದಾರೆ. ಹರೇಕಳ ಹಾಜಬ್ಬ ಅವರು ಶಿಕ್ಷಣ ಕ್ಷೇತ್ರ ಮತ್ತು ತುಳಸಿ ಗೌಡ ಅವರು ಪರಿಸರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇವರಿಬ್ಬರ ನಿಸ್ಪೃಹ ಸೇವೆ ಇತರರಿಗೂ ಮಾದರಿಯಾಗಲಿ ಎಂದು ಅವರು ಆಶಿಸಿದ್ದಾರೆ. . .