ನಾಳೆ 71ನೇ ಗಣರಾಜ್ಯೋತ್ಸವ ಹಿನ್ನೆಲೆ: ಕಡ್ಡಾಯವಾಗಿ ಆಚರಿಸುವಂತೆ ಎಲ್ಲಾ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆ ಆದೇಶ…. ಬೆಂಗಳೂರು,ಜ,25,2020(..): ನಾಳೆ 71ನೇ ಗಣರಾಜ್ಯೋತ್ಸವ ಹಿನ್ನೆಲೆ ಕಡ್ಡಾಯವಾಗಿ ಗಣರಾಜ್ಯೋತ್ಸವ ಆಚರಿಸುವಂತೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ನಾಳೆ ಭಾನುವಾರ ಹಿನ್ನೆಲೆ. ಭಾನುವಾರದ ರಜೆ ಇದೆ ಎಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನ ಮುಂದೂಡುವಂತಿಲ್ಲ. ನಾಳೆಯೇ ಕಡ್ಡಾಯವಾಗಿ ಗಣರಾಜ್ಯೋತ್ಸವ ಆಚರಿಸಬೇಕು. ಮತ್ತು ಕಡ್ಡಾಯವಾಗಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನ ಇಡಬೇಕು ಎಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆ ಆದೇಶಿಸಿದೆ. : – 71st –- – -