ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು… ಶಿವಮೊಗ್ಗ,ಜ,23,2020(..): ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿ ಇದರಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜ್ಞಾನಮೂರ್ತಿ(65), ಚೆನ್ನೇಶ್(37) ಮೃತಪಟ್ಟವರು. ರತ್ನಮ್ಮ ಎಂಬುವವರ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ಕುಟುಂಬದ ಈ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – - - - -